ಅ.30: ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಗರದ ಶಾರದಾ ವಿದ್ಯಾಲಯದಲ್ಲಿ ನಡೆಯಿತು.


ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿಣಿ ಸಭೆ ನಿರ್ಣಯದಂತೆ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವನ್ನು ಇದೇ ಅಕ್ಟೋಬರ್ 30 ರಂದು ಭಾನುವಾರ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು.


ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣದ ಬಳಿಕ ಸಮ್ಮೇಳನ ಉದ್ಘಾಟನಾ ಸಮಾರಂಭ, ಆ ಬಳಿಕ ವಿಚಾರ ಗೋಷ್ಠಿ, ಕವಿಗೋಷ್ಠಿ ಹಾಗೂ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು. ದಿನವಿಡೀ ನಡೆಯುವ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಅನೇಕ ಗಣ್ಯರು ಭಾಗವಹಿಸಿದರು. ಕಾರ್ಯ ಕಾರಣಿ ಸಮಿತಿ ಸದಸ್ಯರು ಸಮ್ಮೇಳನದ ಬಗ್ಗೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರು.


ಅಧ್ಯಕ್ಷರಾದ ಡಾ|| ಮಂಜುನಾಥ ರೇವಣ್‍ಕರ್ ರವರು ಎಲ್ಲರ ಸಹಕಾರದಿಂದ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆಯಿತ್ತರು. ಕಾರ್ಯದರ್ಶಿ ಡಾ|| ಮುರಲೀ ಮೋಹನ್ ಚೂಂತಾರು ರವರು ಸ್ವಾಗತಿಸಿದರು. ಇನ್ನೋರ್ವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಅವರು ಪ್ರಸ್ತಾವಿಸಿದರು. ಖಜಾಂಚಿ ಎಸ್. ಸುಬ್ರಾಯ ಭಟ್ ರವರು ವಂದಿಸಿದರು. ಕಸಾಪ ಸಮಿತಿ ಸದಸ್ಯರು ಈ ಸಭೆಯಲ್ಲಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top