ಮಂಗಳೂರು ವಿವಿ: ಸಂಸ್ಥಾಪನಾ ದಿನಾಚರಣೆ ಇಂದು (ಸೆ. 29)

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 43 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್ 29 (ಗುರುವಾರ) ರಂದು ಅಪರಾಹ್ನ 2.30 ಕ್ಕೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 


ಕರ್ನಾಟಕದ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು ಟಿ ಖಾದರ್, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಗೌರವಾನ್ವಿತ ಅತಿಥಿಗಳಾಗಿರಲಿದ್ದಾರೆ. 


ಅಂತಾರಾಷ್ಟ್ರೀಯ ತರಬೇತುದಾರ ಡಾ. ಭರತ್ ಚಂದ್ರ ಸಂಸ್ಥಾಪನಾ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.  


ಸಮಾರಂಭದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ, ಕೊಡವೂರು, ಉಡುಪಿ ಇಲ್ಲಿನ ಕಲಾವಿದರಿಂದ ʼನೃತ್ಯ ಸಿಂಚನʼ ಕಾರ್ಯಕ್ರಮ ನಡೆಯಲಿದೆ, ಎಂದು ಕುಲಸಚಿವರು ಹಾಗೂ ಕಾರ್ಯಕ್ರಮ ಸಂಯೋಜಕರ ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top