ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಸೆ.5ರಂದು ನಿಗದಿಪಡಿಸಿದ್ದ ಎನ್‌ಇಪಿ-2020 ಬಿಬಿಎ ದ್ವಿತೀಯ ಸೆಮಿಸ್ಟರ್‌ನ BBAKALN201 Kannada ಪರೀಕ್ಷೆಗೆ ಪರೀಕ್ಷಾ ಮಂಡಳಿಯು ತಪ್ಪಾಗಿ ಪ್ರಶ್ನೆಪತ್ರಿಕೆಯನ್ನು ರಚಿಸಿ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ನಿಗದಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಯಾವ ವಿದ್ಯಾರ್ಥಿಗಳೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ತಿಗಳಿಗೆ ತೊಂದರೆಯಾಗದಂತೆ ಮುಂದೂಡಿದ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ