ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ
ಉಜಿರೆ: ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನ ಮೌಲ್ಯಗಳನ್ನು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇರುವ ಸಮರ್ಥ ವೇದಿಕೆಯೇ ರಾಷ್ಟ್ರೀಯ ಸೇವಾ ಯೋಜನೆ. ವ್ಯಕ್ತಿತ್ವದಲ್ಲಿ ಅತ್ಯದ್ಭುತವನ್ನಾಗಿಸಲು ಇದು ಸಹಾಯ ಮಾಡುತ್ತದೆ. ಯಾಂತ್ರಿಕ ಜೀವನದಿಂದ ಹೊರತಾಗಿ ಬಾಳುವುದನ್ನು ಸಹ ಕಲಿಸುತ್ತದೆ. ಒಟ್ಟಾರೆ ಫಲಾಪೇಕ್ಷೆ ಇಲ್ಲದೆ ಮಾಡುವ ಕರ್ತವ್ಯವಾದ ಸೇವೆಯನ್ನು ಮಾಡಲು ರಾಷ್ಟ್ರೀಯ ಸೇವಾ ಯೋಜನೆ ಹೇಳಿಕೊಡುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎ ಕುಮಾರ ಹೆಗ್ಡೆ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದರು.
ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಯೋಜನಾಧಿಕಾರಿ ರಾಜು ಎ.ಎ. ಶುಭಾಶಂಸನೆ ಮಾಡಿದರು. ಸ್ವಯಂ ಸೇವಕರಿಗೆ ಸೂಪರ್ ಮಿನಿಟ್ ಆಟಗಳನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಭ್ಯಾಗತರನ್ನು ಗೌರವಿಸಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಅವರು ಪ್ರಾಸ್ತಾವಿಕ ಮಾತನಾಡಿದರು. ಹಿಮಾ ಭಟ್ ಸ್ವಾಗತಿಸಿ, ಕಿಶೋರ್ ಪಾಟೀಲ್ ಪರಿಚಯಿಸಿದರು. ಅಕ್ಷತಾ ಎಂ.ಜಿ ನಿರೂಪಿಸಿ, ಭೂಮಿಕಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ