ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಸೆ. 24 ರಂದು ಐಕ್ಯೂಎಸಿ ಅಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು ಮತ್ತು ಎರಡು ಇದರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ "ಯುವ ಸಬಲೀಕರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ" ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮತ್ತು ಇಂಜಿನಿಯರಿಂಗ್ ನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ರಮೇಶ್ ಕೆ ಜಿ, ಇವರು ಆಗಮಿಸಿ ವಿದ್ಯಾರ್ಥಿಗಳು ಕೌಶಲ್ಯದ ಜೊತೆಗೆ ಉತ್ತಮ ನಡವಳಿಕೆ ಮತ್ತು ಮೌಲ್ಯಗಳಿಗೆ ಹೆಚ್ಚಿನ ಹೊತ್ತು ನೀಡಬೇಕೆಂದು ಬಹಳ ಅರ್ಥಪೂರ್ಣವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ಟಿ. ಕೆ ಶರತ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಮಹತ್ವದ ಕುರಿತು ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ. ಲೋಕೇಶ ಶುಭ ಹಾರೈಸಿದರು. ಯೋಜನಾಧಿಕಾರಿ ಸಂತೋಷ್ ಪ್ರಭು ಎಂ ಪ್ರಸ್ತಾವಿಕ ನುಡಿಗಳನ್ನು ಆಡಿದರು. ಘಟಕ 1ರ ಯೋಜನಾಧಿಕಾರಿ ಚಿತ್ರಾ ಪಡಿಯಾರ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತಿಯಲ್ಲಿದ್ದರು. ಶ್ರಾವ್ಯ ಸ್ವಾಗತಿಸಿ, ಲಾವಣ್ಯ ಧನ್ಯವಾದವಿತ್ತರು. ವಸುಧಾ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


