ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಕುಮಾರ್ ಹೆಗ್ಡೆ ಅವರು 'ಎಫೀಶಿಯೆಂಟ್ ಮೆಶಿನ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಇಂಪ್ರೂವಿಂಗ್ ದಿ ಪ್ರಿಡಿಕ್ಷನ್ ಆಫ್ ಕ್ರೋನಿಕ್ ಡಿಸೀಸ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.
ಇವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಮೋನಿಕ ಆರ್ ಎಂ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು. ಸಂದೀಪ್ ಕುಮಾರ್ ಹೆಗ್ಡೆ ಅವರು ಅಜೆಕಾರಿನ ಶಿವರಾಯ ಹೆಗ್ಡೆ ಹಾಗೂ ಶೋಭಾ ಹೆಗ್ಡೆ ಅವರ ಪುತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ