ಪುತ್ತೂರು ತಾಲೂಕು 21ನೆಯ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Upayuktha
0

ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು: ಡಾ.ಎಂ.ಪಿ.ಶ್ರೀನಾಥ್



ಪುತ್ತೂರು: ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು. ಈ ಪ್ರದೇಶದಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ಆಯೋಜನೆಗೊಳ್ಳಲಿರುವ ತಾಲೂಕು ಸಾಹಿತ್ಯ ಸಮ್ಮೇಳನ ಹಲವು ಆಯಾಮಗಳಿಂದ ಪ್ರಸ್ತುತಗೊಳ್ಳುತ್ತಿದೆ. ಮಾತ್ರವಲ್ಲದೆ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮುಂದೆ ಸಾಹಿತ್ಯ ಸಮ್ಮೇಳನ ಆಯೋಜಿಸುವವರಿಗೆ ಮಾದರಿಯಾಗಿ ಮೂಡಿಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ 21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಿ.ಪುರಂದರ ಭಟ್ ಮಾತನಾಡಿ ಇಂದು ಅಕ್ಷರ ಕ್ಷರವಾಗುತ್ತಿರುವ ಕಾಲಘಟ್ಟದಲ್ಲಿದ್ದೇವೆ. ಹಾಗಾಗಿ ಅಕ್ಷರಗಳನ್ನು ಹೆಚ್ಚು ಹೆಚ್ಚು ಬಿಡುಗಡೆ ಮಾಡಬೇಕಿದೆ. ಮುಚ್ಚಿಡುವ ಪ್ರಕ್ರಿಯೆಗಿಂತ ತೆರೆದಿಡುವ ಪ್ರಕ್ರಿಯೆ ಸಮಾಜಕ್ಕಿಂದು ಬೇಕಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಈ ಬಾರಿಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಶ್ರೀಧರ ಎಚ್.ಜಿ, ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ಸಮ್ಮೇಳನ ಆಯೋಜಕರಾದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ವಿಶ್ರಾಂತ ಪ್ರಾಚಾರ್ಯ ಪ್ರೊ.ಎ.ವಿ. ನಾರಾಯಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿ.ಬಿ.ಅರ್ತಿಕಜೆ ಉಪಸ್ಥಿತರಿದ್ದರು. ಪುತ್ತೂರು ಸಾಹಿತ್ಯ ಪರಿಷತ್‍ನ ಗೌರವ ಕೋಶಾಧ್ಯಕ್ಷ ಡಾ.ಹರ್ಷಕುಮಾರ್ ರೈ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್‍ನ ನಿಕಟಪೂರ್ವ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top