ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸಹಭಾಗಿತ್ವದಲ್ಲಿ ಉಜಿರೆ ಅತ್ತಾಜೆಯ ದ.ಕ ಜಿ.ಪಂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಪೂರ್ಣ ದಿನದ ಶಿಬಿರ ನಡೆಯಿತು.
ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರು ಶಿಬಿರವನ್ನು ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್ ಇವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಐರಿನ್ ಡೇಸಾ ಅಭ್ಯಾಗತರಾಗಿ ಶುಭ ಕೋರಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಚೇತನಾ ಕುಮಾರಿ , ರೋವರ್ಸ್ ಮತ್ತು ರೇಂಜರ್ಸ್ ಇದರ ಅಧಿಕಾರಿಗಳಾದ ಲಕ್ಷ್ಮೀಶ ಭಟ್ ಹಾಗೂ ಅಂಕಿತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಮೈದಾನದ ಸಮತಟ್ಟು ಹಾಗೂ ಸ್ವಚ್ಛತೆ, ಅತ್ತಾಜೆಯ ಬೃಹತ್ ಕೆರೆಯ ವೀಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ