ನಮ್ಮ ಬಳಿಗೆ ವಿದ್ಯಾರ್ಥಿಗಳು ಬರುವುದಲ್ಲ; ನಾವು ವಿದ್ಯಾರ್ಥಿಗಳ ಬಳಿಗೆ ಹೋಗುತ್ತೇವೆ: ಡಾ.ಎಂ.ಪಿ. ಶ್ರೀನಾಥ್

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆಗಳು, ನಂತೂರು ಮಂಗಳೂರು- ಸಹಯೋಗದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ- ಕವಿ- ಕಾವ್ಯ- ಸಾಹಿತ್ಯ- ಪರಂಪರೆ ಮಾಲಿಕೆ  ಮಾಸ್ತಿ ಕನ್ನಡದ ಆಸ್ತಿ ವಿಚಾರಗೋಷ್ಠಿಯು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು ವಿದ್ಯಾರ್ಥಿಗಳ ಸಾಹಿತ್ಯ ಜ್ಞಾನವನ್ನು ಹೆಚ್ಚಿಸುವುದಕ್ಕೆ ಇಂತಹ ವಿಚಾರಗೋಷ್ಠಿಗಳು ಸಹಕಾರಿ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಪರ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ.ಎಂ.ಪಿ.ಶ್ರೀನಾಥ್ ಅವರು, ವಿದ್ಯಾರ್ಥಿಗಳು ಸಾಹಿತ್ಯಾಭ್ಯಾಸಿ ಗಳಾಗಬೇಕು, ನಮ್ಮ ಬಳಿಗೆ ವಿದ್ಯಾರ್ಥಿಗಳು ಬರುವುದಲ್ಲ ನಾವು ವಿದ್ಯಾರ್ಥಿಗಳ ಬಳಿಗೆ ಬರುತ್ತೇವೆ ಎಂದರು.


ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಚೇತನ್ ಮುಂಡಾಜೆ ಮಾತನಾಡಿ, ಜಿಲ್ಲಾಧಿಕಾರಿಗಳಾಗಿದ್ದುಕೊಂಡು ಸಾಹಿತ್ಯದಲ್ಲಿ ಅಪರಿಮಿತ ಸಾಧನೆಗೈದ ಅವರ ಪರಿಶ್ರಮ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು ಎಂದರು.


ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರತಿಮ್‌ಕುಮಾರ್ ಸ್ವಾಗತಿಸಿ, ಉಪನ್ಯಾಸಕಿ ಭಾರತಿ ವಂದಿಸಿದರು. ಉಪನ್ಯಾಸಕ ಕಾರ್ತಿಕ್‌ಕೃಷ್ಣ ನಿರೂಪಣೆ ಗೈದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top