ಶ್ರೀ ಶಂಕರ ಸಭಾಭವನದ ನಾಮಫಲಕ ಶೃಂಗೇರಿ ಶ್ರೀಗಳಿಂದ ಅನಾವರಣ

Upayuktha
0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ನಾಮಫಲಕವನ್ನು ಶೃಂಗೇರಿಯಲ್ಲಿ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಆಶೀರ್ವಾದಗಳೊಂದಿಗೆ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಸೋಮವಾರ ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಬಾಲಕೃಷ್ಣ ಬೋರ್ಕರ್, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಪ್ರಾಂಶುಪಾಲೆ ಮಾಲತಿ ಭಟ್ ಡಿ, ರಕ್ಷಕಿ ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಮಠದ ಹಿರಿಯರು ಉಪಸ್ಥಿತರಿದ್ದರು. 


ನೂತನವಾಗಿ ತಯಾರಾಗಿರುವ ಶ್ರೀ ಶಂಕರ ಸಭಾಭವನ ಸುಮಾರು ಎರಡು ಸಾವಿರ ಮಂದಿ ಕುಳಿತುಕೊಳ್ಳುವಷ್ಟು ವಿಶಾಲವಾಗಿದೆ. ಹಾಗೆಯೇ ಈ ಸಭಾಭವನದಲ್ಲಿ ಶ್ರೀ ಲಲಿತಾಂಬಿಕಾ ವೇದಿಕೆ ಕೂಡ ನಿರ್ಮಾಣಗೊಂಡಿದ್ದು ಬೃಹತ್ ಕಾರ್ಯಕ್ರಮ ಆಯೋಜನೆಗೆ ಸಹಕಾರಿಯೆನಿಸಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top