ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠವು ಸ್ವಾತಂತ್ರ್ಯದ ಅಮೃತ ವರ್ಷ- ವಿಶೇಷ ಉಪನ್ಯಾಸ ಮಾಲಿಕೆಯಡಿ ಸರಕಾರಿ ಪದವಿಪೂರ್ವ ಕಾಲೇಜು ಮುಲ್ಕಿ ಇವರ ಸಹಯೋಗದಲ್ಲಿ ಸೆ.7ರಂದು 'ಕರಿಮೆಣಸಿನ ರಾಣಿ ಅಬ್ಬಕ್ಕ' ವಿಷಯದ ಬಗ್ಗೆ ಉಪನ್ಯಾಸ ಏರ್ಪಡಿಸಿದೆ.
ಉಳ್ಳಾಲದ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್ ಅವರು ಉಪನ್ಯಾಸ ನೀಡಲಿದ್ದಾರೆ. ಸ.ಪ.ಪೂ ಕಾಲೇಜು ಮುಲ್ಇಯ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸ್ಥಳೀಯ ನಗರ ಪಂಚಾಯತ್ ಸದಸ್ಯ ಹಸನಬ್ಬ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗುಂಡಾಲು ಹರ್ಷರಾಜ ಶೆಟ್ಟಿ ಭಾಗವಹಿಸಲಿದ್ದಾರೆ. ಹಿರಿಯ ಸಹ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಟಿ. ನಾಯಕ ಉಪಸ್ಥಿತರಿರುತ್ತಾರೆ.
ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಮತ್ತು ಮಂಗಳೂರು ವಿವಿ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ