ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ

Chandrashekhara Kulamarva
0

 


ಪುತ್ತೂರು : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ  ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು. ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ. ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top