ಟೇಬಲ್ ಟೆನ್ನಿಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಿಧ್ಯರಾಜ್ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0

 



ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಚೈತನ್ಯ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಬಿಧ್ಯರಾಜ್ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.


ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ ಕೆ. ಎಸ್, ವಾಣಿಜ್ಯ ವಿಭಾಗದ ವಿಘ್ನೇಶ್ ಚಂದ್ರಕಾಂತ್ ಜಾಧವ್, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‍ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top