ಟೇಕ್ವಾಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಲಪಾಡಿಯ ಶಾರದಾ ವಿದ್ಯಾನಿಕೇತನ ಸಂಸ್ಥೆಯಲ್ಲಿ ನಡೆದ  ನಡೆದ ಜಿಲ್ಲಾ ಮಟ್ಟದ ಟೇಕ್ವಾಂಡೊ ಸ್ಫರ್ಧೆಯಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿನಿಶ್ ಕುಮಾರ್, ಪ್ರೀತಂ ಎಸ್ ಎನ್ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಂದನ್ ಗೌಡ ಬಿ. ಎಸ್ ಭಾಗವಹಿಸಿದ್ದರು.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top