ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ವಿದ್ಯಾರ್ಥಿಗಳು ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಸೇರಿದಂತೆ ಎಲ್ಲಾ ಉಪನ್ಯಾಸಕರನ್ನು ಪುಷ್ಪ ಹಾಗೂ ಶುಭಾಶಯ ಪತ್ರಗಳನ್ನು ನೀಡಿ ಶುಭಾಶಯ ಕೋರಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕರಾದ ವಂಶಿ ಭಟ್, ವರ್ಧಿನೀ, ಜಯಂತ್ ಮುಂತಾದವರು ಕಾರ್ಯಕ್ರಮ ಸಂಯೋಜನೆ ಮಾಡಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ