ಉಡುಪಿ: 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರಕ್ಕೆ' ಮೂವರು ಹಿರಿಯ ಸಾಹಿತಿಗಳ ಆಯ್ಕೆ

Chandrashekhara Kulamarva
0

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ   ಪ್ರದಾನ ಮಾಡಲಾಗುವ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2022ಕ್ಕೆ ' ರಾಜ್ಯದ ಮೂವರು ಹಿರಿಯ  ಸಾಹಿತಿಗಳು ಆಯ್ಕೆಯಾಗಿದ್ದಾರೆ.


ಬೆಂಗಳೂರಿನ ಎಚ್. ದಂಡಪ್ಪ (ವಿಮರ್ಶಕರು), ಮಂಗಳೂರಿನ ಡಾ| ರತಿದೇವಿ ಆರ್.(ವೈದ್ಯಕೀಯ ಸಾಹಿತ್ಯ), ಉಡುಪಿಯ ಎಚ್ ಗೋಪಾಲ ಭಟ್ಟ ಕು. ಗೋ (ಸಾಹಿತ್ಯ ಪರಿವ್ರಾಜಕ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ ಒಂದರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ  ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ' ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top