ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ  ಕೊಂಬೆಟ್ಟು ಕ್ರೀಡಾಂಗಣದಲ್ಲಿ  ನಡೆದ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ sಸ್ಫೂರ್ತಿ ಕೆ. ಆರ್ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸ್ಫೂರ್ತಿ ಕೆ. ಆರ್, ಫಾತಿಮತ್ ಅನೀಶ, ವಾಣಿಜ್ಯ ವಿಭಾಗದ ಧನುಷ, ಸಾತ್ವಿ, ಕಲಾ ವಿಭಾಗದ ಕುಸುಮ ಸಿ. ಎಂ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ ಜಿ ಆರ್, ಪುಣ್ಯಶ್ರೀ, ವಾಣಿಜ್ಯ ವಿಭಾಗದ ಶ್ರೇಯ, ವರ್ಷಿಣಿ, ದಿವ್ಯ ಎನ್ ಶೆಟ್ಟಿ, ಮನ್ಯ ಶೆಟ್ಟಿ, ಕಲಾ ವಿಭಾಗದ ಕೀರ್ತಿಲತಾ ಬಿ ಸಿ,ಅನನ್ಯ ಜಿ.ಕೆ ಭಾಗವಹಿಸಿದ್ದರು.


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top