ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪೂಜಾಶ್ರೀ ಎ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ಕೆ, ನತಾಶಾ ಎನ್ ಭಂಡಾರಿ, ಪೂಜಾಶ್ರೀ ಎ, ವಾಣಿಜ್ಯ ವಿಭಾಗದ ಶ್ರಾವ್ಯ, ಹಿತಶ್ರೀ ಎ, ತನುಷಾ ಸಿ ಕೆ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಹಿತಶ್ರೀ ಎಚ್ ಎಚ್, ಶ್ರೀಲಕ್ಷ್ಮೀ ಉಮಾಪತಿ, ವಾಣಿಜ್ಯ ವಿಭಾಗದ ಪ್ರಿಯಾಂಕ ಎಸ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top