ಮಂಗಳೂರು: ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಸೆ.27ರ ಮಂಗಳವಾರ ಸಂಜೆ 4ಗಂಟೆಗೆ ನಗರದ ತಣ್ಣೀರುಬಾವಿ ಕಡಲತೀರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ- 2022 ಮತ್ತು ತಣ್ಣೀರುಬಾವಿ ಬ್ಲೂ ಫ್ಲಾಗ್ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಇಂಧನ, ಕನ್ನಡ ಮತ್ತು ಸಂಸ್ಕøತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸಂಸದರಾದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಿ. ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯಕ್, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಮಂಗಳೂರು ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಗದೀಶ್ ಪೈ ಭಾಗವಹಿಸುವರು. ವಿಶೇಷ ಆಕರ್ಷಣೆಯಾಗಿ ಮರಳು ಶಿಲ್ಪ ರಚನೆ ಹಾಗೂ ಗಾಳಿಪಟ ಹಾರಿಸುವ ಕಾರ್ಯಕ್ರಮ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ