ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ಓಣಂ ಸಂಭ್ರಮ

Upayuktha
0

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವತಿಯಿಂದ ಓಣಂ ಸಂಭ್ರಮಾಚರಣೆ ಮತ್ತು ಪೂಕಳಂ ಸ್ಪರ್ಧೆಯು ಕಾಲೇಜಿನ ಆವರಣದಲ್ಲಿ ನಡೆಯಿತು.


ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ಮಲಯಾಳಂ ಭಾಷಾ ವಿಭಾಗದ ಮುಖ್ಯಸ್ಥ ಡಾ. ಶ್ರೀನಾರಾಯಣನ್, ಆಧುನಿಕತೆಯ ಪ್ರಭಾವದಿಂದ ಹಿಂದಿನಿಂದ ಬಂದ ಸಂಪ್ರದಾಯಗಳು ಹಾಗೂ ಹಬ್ಬಗಳ ಆಚರಣೆಯಲ್ಲಿ ಬದಲಾವಣೆ ಉಂಟಾಗಿದೆ. ಓಣಂ ಹಬ್ಬವು ಮಲಯಾಳಿ ಸಮುದಾಯವನ್ನು ಒಗ್ಗೂಡಿಸುವ ಹಬ್ಬ. ಈ ಹಬ್ಬವು ಇಂದು ನಿನ್ನೆಯದ್ದಲ್ಲ, ಪುರಾತನ ಶಾಸನಗಳಲ್ಲಿಯೂ ಇದರ ಉಲ್ಲೇಖವಿದೆ. ವಿದ್ಯಾರ್ಥಿಗಳು ಆಚರಣೆಯ ಮಹತ್ವ ತಿಳಿದುಕೊಳ್ಳುವುದು ಅಗತ್ಯ ಎಂದರು. ಈ ಸಂದರ್ಭ ಓಣಂನ ಆಶಯ ಗೀತೆಯನ್ನು ಹಾಡಿದರು.


ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಅಂತಹ ಏಕತೆಯ ವೈವಿಧ್ಯಮಯ ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಿಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪ್ರಪಂಚದಾದ್ಯಂತ ಮಲಯಾಳಿಗರು ತಾವಿದ್ದ ದೇಶಗಳಿಲ್ಲಿಯೇ ಓಣಂ ಸಂಭ್ರಮವನ್ನು ಆಚರಿಸುತ್ತಾರೆ. ಯಾವುದೇ ಜಾತಿ, ಧರ್ಮದ ಬೇಧವಿಲ್ಲದೆ ಜೀವನದಲ್ಲಿ ಸೋತವರನ್ನು ಜತೆಗೆ ನಿಂತು ಗೆಲ್ಲಿಸುವ ಪ್ರಯತ್ನ ಮಾಡಬೇಕೆನ್ನುವ ಆಶಯ ಓಣಂ ಹಬ್ಬದ್ದು ಎಂದು ಹೇಳಿದರು.


ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಒಟ್ಟು 22 ತಂಡಗಳು ಭಾಗಿಯಾಗಿದ್ದವು. ಆಳ್ವಾಸ್ ನ್ಯಾಚುರೋಪತಿ ಆ್ಯಂಡ್ ಯೋಗಿಕ್ ಸೈನ್ಸ್‍ನ ತಂಡವು ಪ್ರಥಮ ಸ್ಥಾನ ಪಡೆಯಿತು. ಹೈಸ್ಕೂಲ್ ವಿಭಾಗದ ತಂಡವು ದ್ವಿತೀಯ ಸ್ಥಾನ ಗಳಿಸಿತು. ವಿಜೇತರಿಗೆ ನಗದು ಬಹುಮಾನ ನೀಡಲಾಯಿತು. 

ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮತ್ತು ಉಪನ್ಯಾಸಕಿ ಸುಶ್ಮಿತಾ ಜಯಾನಂದ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಳಿನಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top