ವಿದ್ಯಾಸಿರಿ ಯೋಜನೆ: ಅರ್ಜಿ ಆಹ್ವಾನ

Chandrashekhara Kulamarva
0


ಉಡುಪಿ:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 

 ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ https://dom.karnataka.gov.in/udupi/public,  ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top