ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಸ್ಮರಣಾರ್ಥ 17ನೇ 'ಧ್ವನಿ' ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ

Upayuktha
0

ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಅಜಯ್ ಚಕ್ರವರ್ತಿಗೆ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿ ಪ್ರದಾನ


ಸಂಗೀತ ಕ್ಷೇತ್ರ ವಿಸ್ತಾರವಾದದು : ನ್ಯಾ. ಕೃಷ್ಣ ಎಸ್.ದೀಕ್ಷಿತ್


ಬೆಂಗಳೂರು: ಹಿಂದೂಸ್ಥಾನಿ ಸಂಗೀತ ದಿಗ್ಗಜ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಅವರ ಸ್ಮರಣಾರ್ಥ 'ಧ್ವನಿ' ಸಂಗೀತ ಕಾರ್ಯಕ್ರಮವನ್ನು ಬೆಂಗಳೂರು ಕಿಡ್ನಿ ಫೌಂಡೇಶನ್ ಸಂಸ್ಥೆ ಪ್ರತಿ ವರ್ಷವೂ ಆಯೋಜಿಸುತ್ತಾ ಬಂದಿದೆ. ಈ ವರ್ಷ 17ನೇ 'ಧ್ವನಿ' ಸಂಗೀತ ಸಂಭ್ರಮವನ್ನು ನಗರದ ಜಯನಗರ 8ನೇ ಬ್ಲಾಕ್ ನಲ್ಲಿರುವ ಜೆಎಸ್‌ಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಬಿಕೆಎಫ್ ಸಂಸ್ಥೆಯು ಪ್ರತಿವರ್ಷ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಸಂಸ್ಮರಣ ಸಂಗೀತ್ಸೊತ್ಸವ ಸಂದರ್ಭದಲ್ಲಿ ನಾಡಿನ ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಪ್ರಸಿದ್ಧ ಕಲಾವಿದ ಹಾಗೂ ಗುರುವಿಗೆ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಈ ವರ್ಷ ಹಿಂದೂಸ್ತಾನಿ ಸಂಗೀತ ಪ್ರಪಂಚಕ್ಕೆ ಅನುಪಮ ಕೊಡುಗೆ ನೀಡಿರುವ ಪಂಡಿತ್ ಅಜಯ್ ಚಕ್ರವರ್ತಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಸಂಗೀತ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರವಾಗಿದ್ದು ಇದಕ್ಕೆ ಯಾವುದೇ ರೀತಿಯ ಮಿತಿಯಿಲ್ಲ ಸಂಗೀತದಲ್ಲಿ ಸಾಕಷ್ಟು ಕಲಿಯಬಹುದಾದ ಅಂಶಗಳಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ತಿಳಿಸಿದರು.


ಜಯನಗರದ ಜೆಎಸ್‌ಎಸ್ ಅಡಿಟೋರಿಯಂನಲ್ಲಿ ಬೆಂಗಳೂರು ಕಿಡ್ನಿ ಫೌಂಡೇಶನ್ ವತಿಯಿಂದ ಪಂಡಿತ್ ಮಲ್ಲಿಕಾರ್ಜುನ್ ಮನ್ಸೂರ್ ಸ್ಮರಣಾರ್ಥ 17ನೇ ಧ್ವನಿ ಹಿಂದುಸ್ತಾನಿ ಸಂಗೀತ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಖ್ಯಾತ ಸಂಗೀತ ವಿದ್ವಾಂಸ ಪಂಡಿತ್ ಅಜಯ್ ಚಕ್ರವರ್ತಿ ಮಾತನಾಡಿ, ಕರ್ನಾಟಕ ರಾಜ್ಯ ಅತ್ಯಂತ ಗೌರವಯುತವಾದ ರಾಜ್ಯವಾಗಿದೆ. ದೇಶದಲ್ಲಿ ಕೋವಿಡ್ ಸಂದರ್ಭದಲ್ಲಿ ಅನೇಕ ಉತ್ತಮ ಸಂಗೀತಗಾರರನ್ನು ಕಳೆದುಕೊಂಡಿದ್ದೇವೆ. ಮಲ್ಲಿಕಾರ್ಜುನ ಮನ್ಸೂರ್ ಅವರು ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬಿಸ್ಮಿಲ್ಲಾ ಖಾನ್, ಎಂ.ಎಸ್. ಸುಬ್ಬಲಕ್ಷ್ಮೀ, ಲತಾ ಮಂಗೇಶ್ಕರ್ ಅವರಂತಹ ಅನೇಕರನ್ನು ಸಂಗೀತ ಕ್ಷೇತ್ರ ಬಡವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.


ಖ್ಯಾತ ಗಾಯಕ ಪಂ ಡಾ. ನಾಗರಾಜ್ ರಾವ್ ಹವಲ್ದಾರ್ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಜಿ.ಎ.ಶ್ರೀನಿವಾಸ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು ಕರ‍್ಯಕ್ರಮದ ಆರಂಭದಲ್ಲಿ ಧನಂಜಯ ಹೆಗ್ಡೆ ರವರ ಸಂಗೀತ ಕಛೇರಿ ಏರ್ಪಾಡಾಗಿತ್ತು.


ಕರ್ನಾಟಕದ ಬೆಂಗಳೂರು ಕಿಡ್ನಿ ಫೌಂಡೇಶನ್ ಸಂಸ್ಥೆಯು ಮೂತ್ರಜನಕಾಂಗ, ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗಾಗಿ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದೆ. (ಕಿಡ್ನಿ ಫೌಂಡೇಶನ್ ಟ್ರಸ್ಟ್) 1979 ರಲ್ಲಿ ಪ್ರಾರಂಭವಾದ ಸಂಸ್ಥೆಯು ಮೂತ್ರಜನಕಾಂಗ ಸಂಬಂಧಿತ ರೋಗಗಳಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಕೇಂದ್ರಸ್ಥಾನವಾಗಿ ರೂಪಗೊಂಡಿದೆ. ಬೆಂಗಳೂರು ಕಿಡ್ನಿ ಫೌಂಡೇಶನ್ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. ಈ ಪ್ರತಿಷ್ಠಿತ ಸಂಸ್ಥೆಯ ನೂತನ ಡಯಾಲಿಸಿಸ್ ಕೇಂದ್ರದ ನಿರ್ಮಾಣ ಪೂರ್ಣಗೊಂಡು ಕಾರ್ಯಾರಂಭ ಮಾಡುತ್ತಲಿದ್ದು. ಈ ನೂತನ ಕೇಂದ್ರವು 85 ಡಯಾಲಿಸಿಸ್ ಯಂತ್ರಗಳನ್ನು ಹೊಂದಿದ್ದು, ಆರ್ಥಿಕವಾಗಿ ಕೆಳಸ್ತರದ ರೋಗಗಳಿಗೆ ಅನುಕೂಲಕರವಾಗಿದೆ.


ಈ ನೂತನ ಡಯಾಲಿಸಿಸ್ ಕೇಂದ್ರವು ಡಯಾಲಿಸಿಸ್ ತಂತ್ರಜ್ಞರಿಗೆ ತರಬೇತಿಯನ್ನು ಸಹ ನೀಡಲಾಗುವುದು. ಕಳೆದ ಹದಿನಾರು ವರ್ಷಗಳಿಂದ ಈ ಸಂಗೀತ ಉತ್ಸವ ಯಶಸ್ವಿಯಾಗಿ ನಡೆದು ಬರಲು ದಾನಿಗಳ, ಸಂಗೀತ ಕಲಾರಾಧಕರ, ಸಮಾಜ ಶ್ರೇಯೋಭಿಲಾಷಿಗಳ ಒತ್ತಾಸೆಯೇ ಕಾರಣವಾಗಿದೆ. ಸಂಗೀತ ಉತ್ಸವವಗಳ ಮೂಲಕ ಸಂಗ್ರಹವಾದ ಹಣ ಬಡರೋಗಿಗಳ ಉಚಿತ ಡಯಾಲಿಸಿಸ್ ವೆಚ್ಚವನ್ನು ಭರಿಸಲು ಹಾಗೂ ಬಿಕೆಎಫ್‌ನ ಮೂಲಧನ ಕ್ರೋಢೀಕರಣಕ್ಕೆ ಸಹಾಯಕವಾಗಿದ್ದು, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸಹಾಯಕವಾಗುತ್ತದೆ. ಎಂದು ಸಂಸ್ಥೆಯ ಪ್ರಾಸ್ತಾವಿಕ ನುಡಿಗಳನ್ನಾಡಿದ ಅಧ್ಯಕ್ಷ ಡಾ. ಪಿ. ಶ್ರೀರಾಮ್ ರವರು ತಿಳಿಸಿರುತ್ತಾರೆ. ವಿವರಗಳಿಗೆ : 9901788354.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top