ಮಂಗಳೂರು: ಅಕ್ಟೋಬರ್ 12 ಬುಧವಾರದಂದು ಸಂಜೆ 06.00 - 07.00 ವರೆಗೆ ಆನ್ ಲೈನ್ ಮೂಲಕ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದಿಂದ 'ವಿವೇಕವಾಣಿ' ಸರಣಿಯ 19ನೇ ಉಪನ್ಯಾಸ ಕಾರ್ಯಕ್ರಮ ಪ್ರಸಾರವಾಗಲಿದೆ.
ಶ್ರೀರಂಗಪಟ್ಟಣದ ಖ್ಯಾತ ವೈದ್ಯರು ಮತ್ತು ಚಿಂತಕರಾದ ಡಾ. ಬಿ. ಸುಜಯಕುಮಾರ್ ರವರು "ಸ್ವಾಮಿ ವಿವೇಕಾನಂದರು ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು 8105356290 ಈ ಸಂಖ್ಯೆಯನ್ನು ಸಂಪರ್ಕಿಸಬಹುದು. ಆಸಕ್ತರು ಮುಕ್ತವಾಗಿ ಪಾಲ್ಗೊಳ್ಳಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ