ಧರ್ಮಸ್ಥಳ: ನಾಳೆ (ಅ. 24) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Upayuktha
0

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವವು ನಾಳೆ ಸೋಮವಾರ ಧರ್ಮಸ್ಥಳದಲ್ಲಿ ಸಂಭ್ರಮ ಸಡಗರದಿಂದ ನಡೆಯುತ್ತದೆ.


ದೇವಸ್ಥಾನ ಮತ್ತು ಬಸದಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ವಿವಿಧ ಸಂಸ್ಥೆಗಳ ನೌಕರರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.


ಬೀಡು (ಹೆಗ್ಗಡೆಯವರ ನಿವಾಸ), ದೇವಸ್ಥಾನ, ವಸತಿ ಛತ್ರಗಳನ್ನು ಆಕರ್ಷಕ ವಿನ್ಯಾಸಗಳಿಂದ ಅಲಂಕರಿಸಲಾಗಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣವಿದೆ. ಸಂಜೆ ನಾಲ್ಕು ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಹೆಗ್ಗಡೆಯವರ ಅಭಿನಂದನಾ ಸಮಾರಂಭ ನಡೆಯುತ್ತದೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು.


ಶಾಸಕರುಗಳಾದ ಕೆ. ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್‌ ಕುಮಾರ್ ಶುಭಾಶಂಸನೆ ಮಾಡುವರು. ಹಿರಿಯ ನೌಕರರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಅಭಿನಂದನೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಸಾಧನೆಗಳ ಸರದಾರ:


1948ರ ನವಂಬರ್ 25 ರಂದು ಅಂದಿನ ಧರ್ಮಾಧಿಕಾರಿಗಳಾಗಿದ್ದ ಕೀರ್ತಿ ಶೇಷ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ 1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೆ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು.


ಎಂಟು ಶತಮಾನಗಳಿಂದ ನಡೆಯುತ್ತಿದ್ದಅನ್ನದಾನ, ವಿದ್ಯಾದಾನ, ಔಷಧಿ ದಾನ ಮತ್ತು ಅಭಯ ದಾನದೊಂದಿಗೆ ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಕಲ್ಯಾಣ ಮಂಟಪಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಯುರ್ವೇದ, ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗ ವಿಜ್ಞಾನಕ್ಕೆ ಕಾಯಕಲ್ಪ, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಮೊದಲಾದ ಹತ್ತು ಹಲವು ಯೋಜನೆಗಳನ್ನು ದೇಶದೆಲ್ಲೆಡೆ ಆರಂಭಿಸಿದರು.


ಇವರ ಸೇವೆ-ಸಾಧನೆಯನ್ನು ಮನ್ನಿಸಿ ಪ್ರಧಾನಿ ನರೇಂದ್ರ ಮೋದಿಯವರೆ ಹೆಗ್ಗಡೆಯವರನ್ನು ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿರುವುದು ಧರ್ಮಸ್ಥಳಕ್ಕೆ ಸಂದ ಗೌರವವಾಗಿದೆ. ಸಂಪ್ರದಾಯದಂತೆ ಪಟ್ಟಾಭಿಷೇಕ ವರ್ಧಂತಿ ದಿನ ಹೆಗ್ಗಡೆಯವರು ತಮ್ಮ ಹೊಸ ಯೋಜನೆಗಳನ್ನು ಪ್ರಕಟಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top