ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
ಕೆ.ಡಿ.ಪಿ ಸದಸ್ಯ ಕೆ.ರಾಮ ಕಾರ್ಯಕ್ರಮ ಉದ್ಘಾಟಿಸಿದರು, ಕಾಲೇಜಿನ ಪ್ರಾಂಶುಪಾಲ ಎಂ.ಪಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಭಟ್, ಉಪನ್ಯಾಸಕರಾದ ಚಂದ್ರಶೇಖರ್ ಮೊಗೇರ್ ಹಾಗೂ ಉದಯಕುಮಾರ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪಾಂಡುರಂಗ ಉಪನ್ಯಾಸ ನೀಡಿದರು.
ಅಂಬೇಡ್ಕರ್ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯ ವಿಜೇತ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಜಿ ಹೆಗಡೆ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ