ಪ್ಯಾರಾ ಮೆಡಿಕಲ್ ಕೋರ್ಸ್: ಅರ್ಜಿ ಆಹ್ವಾನ

Upayuktha
0

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಂದ ಪ್ಯಾರಾ ಮೆಡಿಕಲ್ ಮತ್ತು ನಾನ್ ಪ್ಯಾರಾ ಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಪ್ಯಾರಾ ಮೆಡಿಕಲ್ ಡಿಪ್ಲೊಮೊ ಕೋರ್ಸ್ ಪೂರ್ತಿಗೊಳಿಸಿದ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top