ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಉಡುಪಿ: ಜಿಲ್ಲೆಯ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ - ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ನಗರಸಭೆಯಿಂದ ರಚಿಸಲ್ಪಟ್ಟ ಅರ್ಹ ಸ್ವ-ಸಹಾಯ ಗುಂಪುಗಳ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ 18 ರಿಂದ 45 ವರ್ಷದೊಳಗಿನ ಅರ್ಹ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top