ಸಂಚಾರಿ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

Chandrashekhara Kulamarva
0

ಉಡುಪಿ: ಕಾರ್ಕಳ ಯಕ್ಷ ರಂಗಾಯಣದ ಸಂಚಾರಿ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಂಗಭೂಮಿಯಲ್ಲಿ ಅನುಭವ ಹೊಂದಿರುವ, ತಾಳ-ಲಯ-ಸಂಗೀತ - ಕುಣಿತದ ಬಗ್ಗೆ ಕನಿಷ್ಠ ಜ್ಞಾನ ಹೊಂದಿರುವ, ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಓದಲು, ಉಚ್ಚರಿಸಲು ಬರುವ 18 ರಿಂದ 30 ವರ್ಷದೊಳಗಿನ ಕಲಾವಿದರು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 'ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ, ಕೋಟಿ ಚೆನ್ನಯ ಥೀಂ ಪಾರ್ಕ್, ಕಾರ್ಕಳ, ಉಡುಪಿ' ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ ಎಂದು ಯಕ್ಷ ರಂಗಾಯಣದ ನಿರ್ದೇಶಕರ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top