ಮಂಗಳೂರು: ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ, ಸ್ನಾತಕೋತ್ತರ ಪದವೀಧರರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು 2022ರ ನವೆಂಬರ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಮೆರಿಟ್ ಹಾಗೂ ಲಿಖಿತ ಪರೀಕ್ಷೆ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳು ಸ್ಟೈಫಂಡ್ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿ.ಡಬ್ಲ್ಯೂ.ಡಿ ಕಟ್ಟಡ, ಮೈದಾನ್ ರಸ್ತೆ, ಮಂಗಳೂರು-575001 ಈ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ