ನಿರತ ಸಾಹಿತ್ಯ ಸಂಪದ 25ನೇ ವರ್ಷದ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ

Upayuktha
0

ಬಂಟ್ವಾಳ: ಬಂಟ್ವಾಳ ಕಡೆಗೋಳಿಯ ನಿರತ ಸಾಹಿತ್ಯ ಸಂಪದದ ಈ ಬಾರಿ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದೆ.


ಸಾಹಿತ್ಯ ಕ್ಷೇತ್ರದಲ್ಲಿನ ಇವರ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್‌ 6ರಂದು ಬಿ.ಸಿ ರೋಡ್‌ನ ಕನ್ನಡ ಭವನದಲ್ಲಿ ನಡೆಯುವ ನಿರತದ ರಜತ ಮಹೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.


ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ 1996ರಲ್ಲಿ ಪ್ರಾರಂಭವಾದ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ.


ಕೆವಿ. ಚಂದ್ರಕಲಾ ನಂದಾವರ ಪರಿಚಯ: 1950ರಲ್ಲಿ ಜನಿಸಿದ ಇವರು ಸ್ನಾತಕೋತ್ತರ ಶಿಕ್ಷಣದ ಬಳಿಕ ಶಿಕ್ಷಕಿ, ಉಪನ್ಯಾಸಕಿ ಹಾಗೂ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ, ಈಗ ನಿವೃತ್ತರಾಗಿದ್ದಾರೆ. ಹಲವಾರು ಕೃತಿ, ಕವನ ಸಂಕಲನ, ಲೇಖನ ಸಂಕಲನಗಳು, ಅಧ್ಯಯನಾತ್ಮಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಸಹಿತ ರಾಜ್ಯ ಮಟ್ಟದ ಹಲವು ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top