ಗೋವಾ: ನ.13ರಂದು ಹೊರನಾಡ ಕನ್ನಡಿಗರ ಸಾಂಸ್ಕೃತಿಕ ಸಮಾವೇಶ

Upayuktha
0

ಪಣಜಿ: ಗೋವಾದ ಬಿಚೋಲಿಯಲ್ಲಿ ನವೆಂಬರ್ 13ರಂದು ಹೊರನಾಡ ಕನ್ನಡಿಗರ ಸಾಂಸ್ಕೃತಿಕ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ಕೇಂದ್ರ ಸಚಿವ ಶ್ರೀಪಾದ ನಾಯಕ್ ರವರನ್ನು ಆಮಂತ್ರಿಸಲಾಗಿದ್ದು ಇವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಅಖಿಲ ಗೋವಾ ಕನ್ನಡ ಮಹಾಸಂಗದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ ರವರು ಮಾಹಿತಿ ನೀಡಿದ್ದಾರೆ.


ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ ಕರೋನ ಭೀತಿಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಸಾಧ್ಯವಾಗಿರಲಿಲ್ಲ. ಆದರೆ ಪ್ರಸಕ್ತ ವರ್ಷ ಇನ್ನೂ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಕನ್ನಡಿಗರ ಸಮಾವೇಶಕ್ಕೆ 3000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನೀರಿಕ್ಷೆ ಇದೆ. ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸುವ ಕಲಾ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಕಾರ್ಯಕ್ರಮಕ್ಕೆ ಆಗಮಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ರವರು ಸಮ್ಮತಿ ಸೂಚಿಸಿದ್ದಾರೆ. ಇಷ್ಟೇ ಅಲ್ಲದೆ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ರವರು ಕೂಡ ಆಗಮಿಸುವುದಾಗಿ ಸಮ್ಮತಿ ಸೂಚಿಸಿದ್ದಾರೆ ಎಂದು ಹನುಮಂತಪ್ಪ ಶಿರೂರ್ ಮಾಹಿತಿ ನೀಡಿದರು.


ಈ ಕಾರ್ಯಕ್ರಮಕ್ಕೆ ಗೋವಾದ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೇನೆ ಎಂದು ಹನುಮಂತಪ್ಪ ಶಿರೂರು ರೆಡ್ಡಿ ನುಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top