ರಿಷಬ್ ಶೆಟ್ಟಿ ಅವರ ನಟನೆ, ನಿರ್ದೇಶನದಲ್ಲಿ ಮೂಡಿ ಬಂದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೇಶದಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳಿಂದಲೂ ಕಾಂತಾರ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ, ಪ್ರಶಂಸೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರು ಸೇರಿದಂತೆ ಸಿನಿ ಲೋಕದ ಗಣ್ಯರು ಚಿತ್ರ ನೋಡಿ ಶ್ಲಾಘಿಸುತ್ತಿದ್ದಾರೆ.
ಆದರೆ ಇದಕ್ಕೆ ತದ್ವಿರುದ್ಧ ಪ್ರತಿಕ್ರಿಯೆಯನ್ನು ನೀಡಿರುವ ನಟ ಚೇತನ್ ಕುಮಾರ್, ರಿಷಬ್ ಹೇಳಿದಂತೆ ಭೂತಕೋಲ ಇವು ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ಆಹ್ವಾನ ನೀಡಿದ್ದಾರೆ. ಈ ನಟನ ಹೇಳಿಕೆಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.
ರಿಷಬ್ ಹೇಳಿದ ಹಾಗೆ ದೈವಾರಾಧನೆ, ಭೂತಕೋಲ ಇವು ಹಿಂದೂ ಸಂಸ್ಕೃತಿ ಎನ್ನುವುದು ನಿಜವಲ್ಲ ಎಂದಿರುವ ಚೇತನ್, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತಲೂ ಇದು ಹಿಂದಿನಿಂದ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಚೇತನ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
'ನಮ್ಮ ಕನ್ನಡದ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ ನಕಲಿ/ಪರವರ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ' ಎಂದು ಬರೆದುಕೊಂಡಿದ್ದಾರೆ.
ಕಾಂತಾರ ಸಿನಿಮಾದಲ್ಲಿ ಭೂತಕೋಲ, ದೈವಾರಾಧನೆಯೇ ಹೈಲೆಟ್ ಆಗಿ ಮೂಡಿಬಂದಿದೆ. ಈ ಸಿನಿಮಾಗೆ ದೊಡ್ಡ ಮಟ್ಟದ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಚೇತನ್ ಕುಮಾರ್ ನೀಡಿದ ಈ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ನೆಟ್ಟಿಗರು ಚೇತನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬೊಬ್ಬರು ಒಂದೊಂದು ರೀತಿ ಕಾಮೆಂಟ್ ಮಾಡಿ ತಮ್ಮ ಸಿಟ್ಟನ್ನು ಹೊರಹಾಕುತ್ತಿದ್ದಾರೆ. 'ಎಲ್ಲೋ ಪರದೇಶದಲ್ಲಿ ಹುಟ್ಟಿರೋ ನಿನಗೇನು ಗೊತ್ತು ಕರಾವಳಿ ಸಂಸ್ಕೃತಿ ಬಗ್ಗೆ' ಎಂದು ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದಾನೆ. ಮತ್ತೋರ್ವ ಕಾಮೆಂಟ್ ಮಾಡಿ 'ಎಲ್ಲೇ ಹೋದ್ರು ಆ ಧರ್ಮ ಈ ಧರ್ಮ ಅಂತಿಯೋಲ್ಲೋ' ಎಂದು ತಿರುಗೇಟು ಕೊಟ್ಟಿದ್ದಾರೆ. ಈ ರೀತಿಯಾಗಿ, ತರಹೇವಾರಿ ಕಾಮೆಂಟ್ ಮಾಡಿ ಹಲವರು ನಟ ಚೇತನ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.
https://twitter.com/ChetanAhimsa/status/1582338159085780993?s=20&t=h2rJ6y9IAnulGqyCc9eVNw
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ