ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸ.ಪ್ರ.ದ.ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಉಡುಪಿಯಲ್ಲಿ ಇಂದು ನಡೆದ ಏಕತೆಗಾಗಿ ಓಟ ಎಂಬ ಘೋಷ ವಾಕ್ಯದಡಿ ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟದ ಉದ್ಘಾಟನೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಜಂಟಿಯಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. 3 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು 300 ಸ್ಪರ್ಧಿಗಳು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ವಿಜೇತರಾದ ಮೊದಲ ಆರು ಸ್ಫರ್ಧಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ