ಧರ್ಮಸ್ಥಳ: ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಸೋಮವಾರ ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಆಚರಣೆ ಅಂಗವಾಗಿ ಊರಿನ ನಾಗರಿಕರು, ನೌಕರರು, ಸರ್ಕಾರಿ ಅಧಿಕಾರಿಗಳು ಹಾಗೂ ಅಭಿಮಾನಿ ಭಕ್ತರು ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಫಲ, ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು.


ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ಅಭಿನಂದನೆಗಳೊಂದಿಗೆ ಪ್ರಸಾದ ನೀಡಿ ಗೌರವಿಸಿದರು. ಕನ್ಯಾಡಿ ರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್‌ ಕುಮಾರ್ ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top