ದಕ ಜಿಲ್ಲಾ ಪದವಿಪೂರ್ವ ವಿದ್ಯಾಲಯಗಳ ಸಂಸ್ಕೃತ ಉಪನ್ಯಾಸಕರ ಸಂಘದ ಉಪಾಧ್ಯಕ್ಷರಾಗಿ ಡಾ. ಪ್ರಸನ್ನ ಕುಮಾರ್ ಐತಾಳ್‌

Upayuktha
0




ಉಜಿರೆ: ದ.ಕ ಜಿಲ್ಲಾ ಪದವಿಪೂರ್ವ ವಿದ್ಯಾಲಯಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಉಪಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ ಆಗಿದ್ದಾರೆ. 


ಇವರು ಸಾಹಿತ್ಯ, ನಾಟಕ, ಯಕ್ಷಗಾನ, ಗಮಕ ಪ್ರವಚನ ಇತ್ಯಾದಿ ಕಲಾ ಪ್ರಕಾರಗಳಲ್ಲೂ ಗುರುತಿಸಿಕೊಂಡಿದ್ದಾರೆ. ದಾನ ಪುರುಷಾರ್ಥ, ಸಂಸ್ಕೃತ ಮಂಜೂಷಾ, ಸರಳ ಸಂಸ್ಕೃತ ವ್ಯಾಕರಣ ಇತ್ಯಾದಿ ಹದಿನೆಂಟು ಪುಸ್ತಕಗಳನ್ನು ಬರೆದಿದ್ದಾರೆ. ಸುಮಾರು ಹದಿನೈದು ನಾಟಕಗಳಲ್ಲಿ ಅಭಿನಯಿಸಿ, ಸುಮಾರು ಇಪ್ಪತ್ತು ನಾಟಕಗಳ ನಿರ್ದೇಶನ ಮಾಡಿದ್ದಾರೆ. ಅನೇಕ ಸಂಸ್ಕೃತ ಸಮ್ಮೇಳನ ಹಾಗೂ ಕಾರ್ಯಾಗಾರಗಳಲ್ಲಿ ಸಂಶೋಧನ ಪ್ರಬಂಧ ಮಂಡನೆ ಮಾಡಿದ್ದಾರೆ. ಅನೇಕ ಲೇಖನಗಳನ್ನು ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top