ನಿಟ್ಟೆ: 'ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ' ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಭಾನುವಾರ (ಅ.2) ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಛ್ ಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇನ್ನೋರ್ವ ಅತಿಥಿಯಾಗಿ ಆಗಮಿಸಿದ್ದ ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಿಟ್ಟೆ ಕ್ಯಾಂಪಸ್ ನ ಮೈಂಟೆನೆನ್ಸ್ & ಡೆವಲಪ್ಮೆಂಟ್ ನ ನಿರ್ದೇಶಕ ಶ್ರೀ ಯೋಗೀಶ್ ಹೆಗ್ಡೆ ಅವರು ಗಾಂಧೀಜಿಯವರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ೨೦೧೪ ರಿಂದೀಚೆಗೆ ಸ್ವಛ್ ಭಾರತ ಅಭಿಯಾನದ ಮೂಲಕ ಸಾರ್ವಜನಿಕರಲ್ಲಿ ಕಸವಿಲೇವಾರಿ/ ದಾರಿ ಬದಿಯಲ್ಲಿ ತ್ಯಾಜ್ಯವನ್ನು ಹಾಕಬಾರದೆಂಬ ಅರಿವು ಮೂಡಿರುವುದರಿಂದ ಸಮಾಜ ಪರಿವರ್ತನೆಯತ್ತ ಹೆಜ್ಜೆ ಹಾಕಿದೆ ಎಂಬುದು ಶ್ಲಾಘನೀಯ ಎಂದರು.
ನಿಟ್ಟೆ ವಿದ್ಯಾಸಂಸ್ಥೆಯ ಬಾಲಕರ ವಿದ್ಯಾರ್ಥಿ ನಿಲಯದ ಚೀಫ್ ವಾರ್ಡನ್ ಡಾ. ವಿಶ್ವನಾಥ ಸ್ವಾಗತಿಸಿದರು. ಕ್ಯಾಂಪಸ್ ನ ರೆಸಿಡೆಂಟ್ ಇಂಜಿನಿಯರ್ ಡಾ.ಶ್ರೀನಾಥ್ ಶೆಟ್ಟಿ ವಂದಿಸಿದರು. ಕಾಲೇಜಿನ ಸರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣರಾಜ ಜೋಯಿಸ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಸ್ವಛತಾ ಕಾರ್ಯವನ್ನು ಕೈಗೊಂಡರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ