ಪಣಜಿ: ಕರ್ನಾಟಕ ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಕರ್ನಾಟಕ ರಾಜ್ಯದ ಜನತೆ ಮಾತ್ರವಲ್ಲದೆಯೇ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಭಾಗದ ರಸ್ತೆ ಹದಗೆಟ್ಟಿರುವ ಬಗ್ಗೆ ಮುಖ್ಯಮಂತ್ರಿ ಸಾವಂತ್ ಬೇಸರ ವ್ಯಕ್ತಪಡಿಸಿದ್ದು ಗೋವಾ-ಬೆಳಗಾವಿ ಮಾರ್ಗಕ್ಕೆ ಗೋವಾ ಕದಂಬ ಸಾರಿಗೆಯ ಇಲೆಕ್ಟಿಕ್ ಬಸ್ ಓಡಾಟ ಆರಂಭಿಸಲು ಕರ್ನಾಟಕದಲ್ಲಿ ರಸ್ತೆ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಕರ್ನಾಟಕದ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಈ ಸಮಸ್ಯೆಯನ್ನು ಈಗಾಗಲೇ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿರವರ ಗಮನಕ್ಕೆ ತಂದಿದ್ದೇನೆ, ಮಳೆಗಾಲ ಮುಗಿದ ನಂತರ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಗೋವಾ ರಾಜ್ಯ ಸರ್ಕಾರವು ಇಂಧನ ವಾಹನಗಳ ಬದಲು ಇಲೆಕ್ಟಿಕ್ ಬಸ್ ಓಡಾಟ ಆರಂಭಿಸಲು ಮುಂದಾಗಿರುವ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ರವರು ಶ್ವಾಘನೆ ವ್ಯಕ್ತ ಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಗೋವಾದಿಂದ ರಾಯಚೂರು, ಬೆಳಗಾವಿ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಇಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ರಸ್ತೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ