ಅ.29 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿಪ್ರದಾನ ಕಾರ್ಯಕ್ರಮ

Upayuktha
0

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2021-22 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಅಕ್ಟೋಬರ್ 29 ರಂದು ಬೆಳಗ್ಗೆ 9: 45 ಗಂಟೆಗೆ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಅಮೇರಿಕದ ಹ್ಯಾರಿಸ್ಬರ್ಗ್ ನಲ್ಲಿರುವ ಪೆನ್ ಸ್ಟೇಟ್ ವಿಶ್ವವಿದ್ಯಾಲಯದ ಎಕಡೆಮಿಕ್ ಎಫೇರ್ಸ್ ಎಡ್ಮಿನಿಶ್ಟ್ರೇಶನ್ ನ ಸೀನಿಯರ್ ಅಸೋಸಿಯೇಟ್ ಡೀನ್ ಡಾ.ಒಮಿದ್ ಅನ್ಸಾರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀ ಎನ್ ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.


2021-22 ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರೊವಿಶನಲ್ ಡಿಗ್ರಿ ಸರ್ಟಿಫಿಕೇಟ್ ನೀಡಲಾಗುವುದು. ಶೈಕ್ಷಣಿಕ ಸಾಧನೆಗೈದ 32 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗುರುತಿಸಲಾಗುವುದು. ಪ್ರತೀ ವರ್ಷದಂತೆ ಈ ಕಾರ್ಯಕ್ರಮವನ್ನು ಲೈವ್ ವೆಬ್‌ಕಾಸ್ಟ್ ಮಾಡುವ ಯೋಜನೆಯನ್ನು ಸಂಸ್ಥೆಯು ರೂಪಿಸಿದ್ದು, ಕಾರ್ಯಕ್ರಮದ ಲೈವ್ ವೀಕ್ಷಣೆಗಾಗಿ https://nmamit.nitte.edu.in/ ಲಿಂಕ್‌ನ್ನು ಉಪಯೋಗಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top