ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

Upayuktha
0

ಕಾರ್ಕಳ: ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2022ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ನವೆಂಬರ್‌ 1ರಂದು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನಡೆಯಲಿದೆ.


ಶ್ರೀಮತಿ ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿಯನ್ನು ಕೊಪ್ಪ ತಾಲೂಕಿನ ಹರಿಹರಪುರದಲ್ಲಿರುವ ‘ಪ್ರಬೋಧಿನಿ ಟ್ರಸ್ಟ್’ಗೆ, ಹಿರಿಯ ಪತ್ರಕರ್ತ ಪಾ.ವೆಂ. ಆಚಾರ್ಯ ಹೆಸರಿನ ‘ಪಾ.ವೆಂ. ಟ್ರಸ್ಟ್ ದತ್ತಿನಿಧಿಯಿಂದ ನೀಡಲಾಗುವ ಪಾ.ವೆಂ. ಮಾಧ್ಯಮ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಎನ್. ಗುರುರಾಜ್ ಅವರಿಗೆ, ಹಿರಿಯ ಭಾಷಾ ತಜ್ಞ ಡಾ.ಯು.ಪಿ. ಉಪಾಧ್ಯಾಯ ಅವರ ಹೆಸರಿನ ‘ಮಹೋಪಾಧ್ಯಾಯ ಪ್ರಶಸ್ತಿ’ಯನ್ನು ಶಿಕ್ಷಕಿ, ಸಂಶೋಧಕಿ, ಗಮಕಿ ಹಾಗೂ ತಮಿಳು, ರಷ್ಯನ್ ಮತ್ತು ಜಪಾನಿ ಭಾಷಾಜ್ಞಾನವನ್ನೂ ಹೊಂದಿರುವ ಡಾ. ವಾರಿಜಾ ಎನ್. ಅವರಿಗೆ ಮತ್ತು ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ ‘ಪ್ರಾಧ್ಯಾಪಕ ಸಂಶೋಧಕ ಪ್ರಶಸ್ತಿ’ಯನ್ನು ಭಾಷಾ ವಿದ್ವಾಂಸರೂ, ಸಂಶೋಧಕರೂ ವಿಮರ್ಶಕರೂ, ಅನುವಾದಕರೂ ಆಗಿರುವ ಪ್ರೊ. ಆರ್. ಶೇಷಶಾಸ್ತ್ರಿಯವರಿಗೆ ನೀಡಲು ನಿರ್ಣಯಿಸಲಾಗಿದೆ.


ಪ್ರಶಸ್ತಿಯು ತಲಾ 10,000 ರೂಪಾಯಿಗಳ ಗೌರವ ಸಂಭಾವನೆ, ತಾಮ್ರ ಪತ್ರ ಮತ್ತು ಸನ್ಮಾನಗಳನ್ನು ಒಳಗೊಂಡಿದ್ದು ಇದೇ ನವಂಬರ್ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿವರಗಳಿಗೆ: ಸದಾನಂದ ನಾರಾವಿ

ದೂರವಾಣಿ: 9008978366

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top