ಮಂಗಳೂರು: ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ, ಬೆಂಗಳೂರು ಇವರು 2022-23ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ದಿನಾಂಕ 15-10-2022 ರಿಂದ 16-10-2022ರ ತನಕ ಗದಗ್ ನಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟವನ್ನು ದ. ಕ ಜಿಲ್ಲೆಯಿಂದ ಪ್ರತಿನಿಧಿಸಿದ ಸೂರಜ್ ಪದವಿ ಪೂರ್ವ ಕಾಲೇಜು, ಮುಡಿಪು ಇಲ್ಲಿಯ ದ್ವಿತೀಯ ವಿಜ್ಞಾನ ವಿಭಾಗದ ವಿಧ್ಯಾರ್ಥಿ ಎಸ್. ಮೊಹಮ್ಮದ್ ರೈಫ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಮೊಹಮ್ಮದ್ ಆಸಿರ್ ರವರು ರಾಜ್ಯಮಟ್ಟದಲ್ಲಿ ವಿಜೇತರಾಗಿ ನಮ್ಮ ಜಿಲ್ಲೆಗೆ ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಸೂರಜ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ| ಮಂಜುನಾಥ್ ಎಸ್. ರೇವಣ್ ಕರ್, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ