ಪಣಜಿ: ಕೋಟಿಕಂಠ ಗಾಯನ ಕಾರ್ಯಕ್ರಮ

Upayuktha
0

ಪಣಜಿ: 67ನೆಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆಯು ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ ಇಂದು ಗೋವಾದ ಜುವಾರಿನಗರ ಯಲ್ಲಾ ಲಿಂಗೇಶ್ವರ ಮಠದ ಆವರಣದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಉತ್ಸಾಹದಿಂದ ಕನ್ನಡಿಗರು ಪಾಲ್ಗೊಂಡಿರುವುದು ಹೆಮ್ಮೆಯ ಸಂಗತಿ. ಇದರಿಂದಾಗಿ ಕನ್ನಡಿಗರ ಸ್ವಾಭಿಮಾನ ಇನ್ನಷ್ಟು ಹೆಚ್ಚಳವಾಗಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ದಣ್ಣ ಮೇಟಿ ಹೇಳಿದರು.


ಗೋವಾ ವಾಸ್ಕೋದ ಜುವಾರಿನಗರದ ಎಲ್ಲಾ ಲಿಂಗೇಶ್ವರ ಮಠದ ಆವರಣದಲ್ಲಿ ಆಯೋಜಿಸಿದ್ದ ಕೋಟಿಕಂಠ ಗಾಯನದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.


ನಾವು ಎಲ್ಲೇ ಇದ್ದರೂ ಹೇಗೆ ಇದ್ದರೂ ಎಂದೆಂದಿಗೂ ಕನ್ನಡಿಗರಾಗಿರಬೇಕು. ಬ್ರಿಟನ್ ನಲ್ಲಿ ಶೌನಕ್ ರವರು ಗೋಪೂಜೆ ಮೂಲಕ ತಮ್ಮ ಅಧಿಕಾರ ಸ್ವೀಕಾರ ಮಾಡಿದರು. ಅದೇ ರೀತಿ ನಾವು ಕೂಡ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಲು ಮುಂದಾಗಬೇಕು ಎಂದು ಸಿದ್ದಣ್ಣ ಮೇಟಿ ಅಭಿಪ್ರಾಯ ಪಟ್ಟರು.


ಸಂಗೀತ ಶಿಕ್ಷಕ ಬಾಬು ಬೂಸಾರಿ ರವರ ನೇತೃತ್ವದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುಟ್ಟ ಪುಟ್ಟ ಮಕ್ಕಳು ದೇಶಾಭಿಮಾನದ ಗೀತೆ ಹಾಡಿದರು.


ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕದ ಮತ್ತು ದಕ್ಷಿಣ ಗೋವಾ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಕನ್ನಡಿಗರು ಉಪಸ್ಥಿತರಿದ್ದರು. ಅಖಿಲ ಗೋವಾ ಕನ್ನಡ ಮಹಾಸಂಗದ ಕಾರ್ಯದರ್ಶಿ ಶಿವಾನಂದ ಬಿಂಗಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ವಂದನಾರ್ಪಣೆ ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top