ಉಡುಪಿ: ಅ. 22 ರಂದು ಕೃಷಿ ಮಹೋತ್ಸವ

Upayuktha
0

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಜಿಲ್ಲಾ ಕೃಷಿಕ ಸಮಾಜ, ಉಡುಪಿ ಮತ್ತು ದಕ್ಷಿಣ ಕನ್ನಡ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ, ಮುಖ್ಯಮಂತ್ರಿಗಳ ನೈಸರ್ಗಿಕ ಕೃಷಿ ಯೋಜನೆ, ವ.ಕೃ.ತೋ.ಸಂ. ಕೇಂದ್ರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮಹೋತ್ಸವ ಕಾರ್ಯಕ್ರಮವು ಅಕ್ಟೋಬರ್ 22 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ.


ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾಗವಹಿಸಲಿದ್ದಾರೆ.


ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ|| ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ ಅಧ್ಯಕ್ಷ ಕೆ ಉದಯ್‌ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್‌ ಎಸ್‌ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್, ಚಾಂತಾರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಬೇಬಿ ಆರ್ ಪೂಜಾರಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top