ಭೂಸ್ವಾಧೀನ ಸಂದರ್ಭ ವಸತಿ ವಂಚಿತರಾಗುವವರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ

Upayuktha
0

ಮಂಗಳೂರು: ಎಂ.ಆರ್.ಪಿ.ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ವಸತಿ ವಂಚಿತರಾಗುವ ಕುಟುಂಬಗಳಿಗೆ ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ.ಆರ್.ಪಿ.ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.


ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.


ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ.ಆರ್.ಪಿ.ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು. ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಮನೆ ಕಳೆದುಕೊಳ್ಳುತ್ತಿರುವ ಕುಟುಂಬಕ್ಕೆ ಉದ್ಯೋಗ ದೊರಕಿಸಿಕೊಡುವಲ್ಲಿ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.


ಶಾಸಕ ಉಮಾನಾಥ ಕೋಟ್ಯಾನ್, ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ, ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾವ್, ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್, ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top