ಮಂಗಳೂರಿನ ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಶಾಸಕ ಕಾಮತ್ ಮನವಿ

Upayuktha
0

ಮಂಗಳೂರು: ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವರಾದ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು. 


ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತಿದ್ದು, ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.


ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ವ್ಯವಸ್ಥಾಪಕ ನಿರ್ದೇಶರಾದ ಎಂ ವೆಂಕಟೇಶ್, ಪಿಎಫ್ ಕಚೇರಿ ಆಯುಕ್ತರಾದ ಉಣ್ಣಿಕೃಷ್ಣನ್, ಇ.ಎಸ್.ಐ ಆಸ್ಪತ್ರೆಯ ಪ್ರಮುಖರು, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ ಹಾಗೂ ಇತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top