ಮಂಗಳೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ 2021- 21 ಮತ್ತು 2021-22 ನೇ ಶೈಕ್ಷಣಿಕ ವರ್ಷದ ಹೊಸ ಶೈಕ್ಷಣಿಕ ನಿಯಮಗಳ ಪ್ರಕಾರ ತಾಂತ್ರಿಕ ಅಡೆತಡೆಯಿಂದ ನಿಯಮಿತ ಕಾಲದೊಳಗೆ ಪರೀಕ್ಷೆ ಮತ್ತು ಫಲಿತಾಂಶಗಳನ್ನು ನೀಡಲು ಸಾಧ್ಯವಾಗಿರದೇ ಇರುವುದರಿಂದ, ವಿವಿ ವ್ಯಾಪ್ತಿಯಲ್ಲಿ ಹಾಸ್ಟೆಲ್ ಪ್ರವೇಶಾತಿ ಕೋರಿ ಮತ್ತು ಮರು ಪ್ರವೇಶಾತಿ ಕೋರಿ ಬರುವ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯವು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜೊತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಯಮಿತಗಳನ್ನು ಕೋರಿಕೊಂಡಿದೆ.
ಈ ಸಂಬಂಧ ಇಲಾಖೆಗಳಿಗೆ ಪತ್ರ ಬರೆದಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್ ಧರ್ಮ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ಅಕ್ಟೋಬರ್ 10 ರಂದು ಮುಕ್ತಾಯಗೊಂಡಿದ್ದು, ಸರಕಾರದ ನಿರ್ದೇಶನದಂತೆ ಆರನೇ (ಕೊನೆಯ) ಸೆಮಿಸ್ಟರ್ ಫಲಿತಾಂಶವನ್ನು ಆದ್ಯತೆಯ ಮೇರೆಗೆ ನೀಡಬೇಕಾಗಿದೆ. 6 ನೇ ಸೆಮಿಸ್ಟರ್ ನ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಜೊತೆಗೆ ಉಳಿದ 2 ಮತ್ತು 4ನೇ ಸೆಮಿಸ್ಟರ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಗಳನ್ನು ವಿವಿಯು ಕೈಗೆತ್ತಿಕೊಂಡಿದೆ.
ಜೊತೆಗೆ ಎನ್ಇಪಿ ಬ್ಯಾಚ್ನ ಮೊದಲ ಸೆಮಿಸ್ಟರ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯಾರ್ಥಿಗಳು ಹಾಸ್ಟಲ್ ಪ್ರವೇಶಾತಿ ಕೋರಿ ಮತ್ತು ಮರು ಪ್ರವೇಶಾತಿ ಕೋರಿ ಬಂದಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸುವಂತೆ ಕೋರಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ವಿತರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ