ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಬೆಳ್ತಂಗಡಿ ತಾಲೂಕಿನ ಮಲವಂತಿಗೆಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 03 ರಿಂದ 09 ರ ತನಕ ನಡೆಯಲಿದೆ.
ನವೆಂಬರ್ 03 ರಂದು ಮಧ್ಯಾಹ್ನ 2.30 ಘಂಟೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮಲೆನಾಡು ಎಜ್ಯುಕೇಶನ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಧರ ಭಿಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಹಾಗೂ ಶಿಕ್ಷಣಾಧಿಕಾರಿ ವಿರೂಪಾಕ್ಷಯ್ಯ ಮುಖ್ಯ ಅತಿಥಿಗಳಾಗಿರುತ್ತಾರೆ. ಮಲವಂತಿಗೆಯ ಗ್ರಾಮಕರಣಿಕರಾದ ಸಂತೋಷ ಕುಮಾರ್ ಅವರು ಕರಪತ್ರ ಬಿಡುಗಡೆ ಮಾಡಲಿದ್ದಾರೆ.
ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ , ಉಪಾಧ್ಯಕ್ಷ ಡಿ. ದಿನೇಶ ಗೌಡ , ಬಂಗಾಡಿ ಕ್ಲಸ್ಟರ್ ಇದರ ಸಿ.ಆರ್.ಪಿ ರಮೇಶ್ ಹಾಗೆಯೇ ರೋಹಿಣಿ ಗೌಡ, ಪವಿತ್ರ ಪೂಜಾರಿ, ಶೀನಪ್ಪ ಗೌಡ, ಮೊಹಮ್ಮದ್ ದಿಡುಪೆ, ಎನ್. ಟಿ. ನಾರಾಯಣ ಗೌಡ, ಆನಂದ ಗೌಡ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ದಿನೇಶ ಚೌಟ ಹಾಗೂ ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ಪ್ರತಿ ದಿನ ಶ್ರಮದಾನ, ಶೈಕ್ಷಣಿಕ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ