ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಕ್ಟೋಬರ್ 29 ರಂದು ದೇವಾಲಯಗಳ ನಗರ ನಂಜನಗೂಡಿಗೆ ಭೇಟಿ ನೀಡಿ, ಸರಣಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ನಡೆಯಲಿರುವ ಪಕ್ಷದ ಸಭೆಯಲ್ಲಿ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಸಲಹೆಗಳನ್ನು ಪಡೆಯಲಾಗುವುದು ಎಂದು ರಾಜ್ಯಾಧ್ಯಕ್ಷರ ಆಗಮನಕ್ಕೆ ವಿಶೇಷ ಪ್ರಯತ್ನ ನಡೆಸಿರುವ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಹೇಳಿದ್ದಾರೆ.
ಒಬಿಸಿ ಮೋರ್ಚಾ ಸಭೆಯಲ್ಲಿ ಪಾಲ್ಗೊಳ್ಳಲಿರುವ ಕಟೀಲ್ ಪೌರಕಾರ್ಮಿಕ ಕಾಲೋನಿಗೆ ಭೇಟಿ, ಅಂಬೇಡ್ಕರ್ ಪ್ರತಿಮೆ ಹಾಗೂ ವಾಲ್ಮೀಕಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ನಂತರದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
ನಂಜನಗೂಡಿಗೆ ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರ ಅನೌಪಚಾರಿಕ ಭೇಟಿ ನೀಡಿದ ಕುರಿತು ಪ್ರಸ್ತಾಪಿಸಿದ ಹರ್ಷವರ್ಧನ್, ನವೆಂಬರ್ 20 ರಂದು ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎಸ್ಟಿ ಸಮಾವೇಶಕ್ಕೆ ಹಾಜರಾಗುವಂತೆ ರಾಮುಲು ಅವರು ತಮಗೆ ಆಹ್ವಾನಿಸಿದ್ದು, ಅಂದು ತಾವು ನಂಜನಗೂಡಿನಿಂದ ಹಲವಾರು ಕಾರ್ಯಕರ್ತರೊಂದಿಗೆ ಬಳ್ಳಾರಿಗೆ ತೆರಳುತ್ತಿರುವುದಾಗಿ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ