61ನೇ ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಪವಿತ್ರ.ಜಿ ಆಯ್ಕೆ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ 61ನೇ ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.


ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 15 ರಿಂದ 19 ರವರೆಗೆ ನಡೆಯುವ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಇವರು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top