ಹೊಸದಿಲ್ಲಿ: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು. ಶ್ತೀ ವಿಶ್ವೇಶತೀರ್ಥಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು.
ಅಡ್ವಾಣಿಯವರಿಗೆ ಶ್ರೀಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು. ಅಡ್ವಾಣಿ ಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು. ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು ತನಕ ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ ಆಡ್ವಾಣಿ ಅವರನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ ಆಶೀರ್ವದಿಸಿದರು. pic.twitter.com/LqpqYOH7Xt
— Upayuktha News (@UpayukthaNews) October 12, 2022
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ