ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ಧ್ವಜಾರೋಹಣ

Upayuktha
0

ಪುತ್ತೂರು: ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿ.ಬಿ.ಎಸ್.ಸಿ. ವಿದ್ಯಾಲಯದ ಆವರಣದಲ್ಲಿ ನಡೆಯಿತು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ ಜೈನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಪರಿಷತ್ ಧ್ವಜಾರೋಹಣ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು.


ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶ್ರೀಧರ ಹೆಚ್.ಜಿ., ಕ.ಸಾ.ಪ. ಜಿಲ್ಲಾ ಗೌರವ ಕೋಶಾಧ್ಯಕ್ಷ ಬಿ. ಐತಪ್ಪ ನಾಯ್ಕ್, ಸಾಹಿತಿ ಪ್ರೊ.ವಿ.ಬಿ. ಅರ್ತಿಕಜೆ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿಯ ಸದಸ್ಯರುಗಳಾದ ಪುರಂದರ ಭಟ್, ಸುರೇಶ್ ಶೆಟ್ಟಿ, ನಗರ ಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಕಸಾಪ ತಾಲೂಕು ಘಟಕ ಗೌರವ ಕೋಶಾಧ್ಯಕ್ಷ ಡಾ. ಹರ್ಷಕುಮಾರ್ ರೈ, ಆಶಾ ಬೆಳ್ಳಾರೆ, ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಕ.ಸಾ.ಪ. ತಾಲೂಕು ಸದಸ್ಯ ಡಾ. ವಿಜಯಕುಮಾರ ಮೊಳೆಯಾರ, ಅಂಬಿಕಾ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ಪದವಿ ಕಾಲೇಜು ಪ್ರಾಂಶುಪಾಲ ರಾಕೇಶ್ ಕುಮಾರ್ ಕಮ್ಮಜೆ, ಬಪ್ಪಳಿಗೆ ಅಂಬಿಕಾ ಪದವಿವೂರ್ವ ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ಪ್ರಭು, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ., ಸಿಬಿಎಸ್‌ಸಿ ಸಂಸ್ಥೆ ಪ್ರಾಂಶುಪಾಲೆ ಮಾಲತಿ ಡಿ. ಮತ್ತಿತರರು ಉಪಸ್ಥಿತರಿದ್ದರು.


ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು, ಅಂಬಿಕಾ ಸಿ.ಬಿ.ಎಸ್.ಸಿ. ವಿದ್ಯಾಲಯದ ಶಿಕ್ಷಕಿ ಸುಜಯಾ ವಂದಿಸಿದರು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್. ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top